ಪ್ರತಿ ನವೆಂಬರ್ನಲ್ಲಿ ಕನ್ನಡತನ ಜಾಗೃತವಾಗುವಂತೆ ಈ ಸಲವೂ ಅನೇಕ ಕೈಗಾರಿಕೆಗಳಲ್ಲಿ ಸಂಬಂಧಿಸಿದಂತೆ ಕೆಳಗಿನ ವಿಷಯಗಳನ್ನು ಗಮನಿಸುವುದು ಸೂಕ್ತ.
0 Comments
ಮಾನವ ಸಂಪನ್ಮೂಲ ಸಮ್ಮೇಳನಕ್ಕೆ ಬರೆದ ಲೇಖನ ಗೋವಿಂದರಾಜುಎನ್.ಎಸ್. ಮಾನವ ಸಂಪನ್ಮೂಲ ಪ್ರಧಾನ ವ್ಯವಸ್ಥಾಪಕರು, ಕರ್ನ್-ಲಿಬರ್ಸ್ (ಇಂಡಿಯ) ಪ್ರೈ.ಲಿ., ಅಂತರಸನಹಳ್ಳಿ, ತುಮಕೂರು. ಕಳೆದ ಎರಡು ದಶಕಗಳಲ್ಲಿ ಭಾರತದ ಆರ್ಥಿಕತೆಯಲ್ಲಿ ಜಾಗತೀಕರಣ, ಮುಕ್ತ ಆರ್ಥಿಕ ನೀತಿ, ವಿದೇಶಿ ಬಂಡವಾಳದ ಹರಿವು, ಇತ್ತೀಚಿನ ಸರಕು ಮತ್ತು ಸೇವಾ ತೆರಿಗೆ, ನೋಟು ಅಮಾನ್ಯೀಕರಣ ಇನ್ನು ಹಲವಾರು ಬದಲಾವಣೆಗಳಿಂದಾಗಿ ಸಾಕಷ್ಟು ಬದಲಾವಣೆಗಳನ್ನು ಕಂಡಿದ್ದೇವೆ. ಅಲ್ಲದೆ ಕಾರ್ಮಿಕ ಕಾನೂನುಗಳಲ್ಲಿ ಕೆಲವೊಂದು ಮಹತ್ತರ ಬದಲಾವಣೆಗಳನ್ನು ತರಲಾಗಿದೆ.
ಎಸ್.ವಿ. ಮಂಜುನಾಥ್ ಸಹನಿರ್ದೇಶಕರು, ಅಜೀ಼ಮ್ ಪ್ರೇಮ್ಜಿ ವಿಶ್ವವಿದ್ಯಾಲಯ, ಕರ್ನಾಟಕ ಕಾರ್ಮಿಕ ಸಂಘಗಳೊಂದಿಗಿನ ನನ್ನ ಒಡನಾಟವು ನನ್ನ ವೃತ್ತಿಜೀವನದಲ್ಲಿ ಅತ್ಯಂತ ಪ್ರಮುಖ ಭಾಗವಾಗಿದ್ದು ನೇರವಾಗಿ ನಾನು ಪಡೆದ ಅನುಭವಗಳ ಹಲವಾರು ಮಜಲುಗಳನ್ನು ಇಲ್ಲಿ ತೆರೆದಿಡುವ ಪ್ರಯತ್ನ ನನ್ನದು.
ನನ್ನ ಅನುಭವಗಳನ್ನು ಹಂಚಿಕೊಳ್ಳುವ ಮುನ್ನ ಕಾರ್ಮಿಕ ಸಂಘಗಳು ಕೈಗಾರಿಕೆಗಳಲ್ಲಿ ಯಾವ ಸಾಂದರ್ಭಿಕ ಹಿನ್ನೆಲೆಯಲ್ಲಿ ಪ್ರಸ್ತುತ ಕಾರ್ಯಪ್ರವೃತ್ತವಾಗಿವೆ ಎಂಬುದನ್ನು ಅರಿಯುವುದು ಅಗತ್ಯವಾಗಿದೆ. ಕೆ.ವಿಠ್ಠಲ್ ರಾವ್ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ಅಂಡ್ ಲೀಗಲ್ ಅಡ್ವೈಸರ್ ಶ್ರೀ ಖಾಡಿಲ್ಕರ್, ಎಲ್ಲರಿಗೂ ನಮಸ್ಥಾರ. ಸಂಸ್ಥೆಯು ತೆಗೆದುಕೊಳ್ಳಲು ನಿರ್ಧಸಿರುವ ಒಂದು ಪ್ರಮುಖ ಯೋಜನೆಯ ಬಗ್ಗೆ ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ನಾನು ಹರ್ಷಿಸುತ್ತೇನೆ. ನಿಮಗೆಲ್ಲಾ ತಿಳಿದಿರುವಂತೆ ಜರ್ಮನಿಯ ನನ್ನ ಹಿಂದಿನ ಭೇಟಿಯ ಸಂದರ್ಭದಲ್ಲಿ, ಏರ್ಕ್ರಾಫ್ಟ್ನ ಟ್ರಾನ್ಸ್ಮಿಷನ್ ಬಿಡಿಭಾಗಗಳನ್ನು ಉತ್ಪಾದಿಸಲು ಮತ್ತು ಸರಬರಾಜು ಮಾಡುವ ಬಗ್ಗೆ ಬೆಕ್ಸ್ಟೀರ್ನೊಂದಿಗೆ ಒಂದು ಕರಾರಿಗೆ ಸಹಿ ಮಾಡಿರುತ್ತೇನೆ. ಆ ಬಿಡಿಭಾಗವು ನವೀನ ತಾಂತ್ರಿಕತೆಯೊಂದಿಗೆ ಅತ್ಯಂತ ಕ್ಲಿಷ್ಟಕರವಾದದ್ದಾಗಿರುತ್ತದೆ. ನಮ್ಮ ಸಂಸ್ಥೆಯು ಅಂತಹ ಬಿಡಿಭಾಗವನ್ನು ಉತ್ಪಾದಿಸಿ ರಫ್ತು ಮಾಡುವ ಮೊದಲನೇ ಸಂಸ್ಥೆಯಾಗಿರುತ್ತದೆ. ಅಂದಾಜಿನ ಪ್ರಕಾರ, ನಮಗೆ ಬೇಡಿಕೆ ಆದೇಶ ಬಂದಲ್ಲಿ, ನಮ್ಮ ಉತ್ಪಾದನಾ ಸಾಮರ್ಥ್ಯದ ಬಳಕೆಯು ಶೇಕಡ 85ರಷ್ಟಕ್ಕೆ ತಲುಪಬಹುದು ಮತ್ತು ಲಾಭಾಂಶವೂ ಸಹ ಉತ್ತಮವಾಗಿರುತ್ತದೆ. ಇದೊಂದು ಒಳ್ಳೆಯ ವ್ಯವಹಾರದ ಸವಾಲಾಗಿರುತ್ತದೆ ಮತ್ತು ಸಂಸ್ಥೆಯು ಬೆಕ್ಸ್ಟೀರ್ನೊಂದಿಗೆ ಈಗಾಗಲೇ ಕರಾರಿಗೆ ಸಹಿಮಾಡಿರುವ ಬಗ್ಗೆ ತಿಳಿಸಲು ನಾನು ಹರ್ಷಿಸುತ್ತೇನೆ.
ಎಂ.ಆರ್. ನಟರಾಜ್ ಉದ್ದಿಮೆಗಳನ್ನು ನಡೆಸುತ್ತಿರುವ ಕೈಗಾರಿಕೋದ್ಯಮಿಗಳು ತಮ್ಮ ಸಂಸ್ಥೆಯ ಲಾಭಾಂಶಗಳು ಕಡಿಮೆಯಾದಂತೆ ತಮ್ಮ ಸಂಸ್ಥೆಯ ಖರ್ಚು ವೆಚ್ಚಗಳನ್ನು ಕಡಿಮೆಗೊಳಿಸುವ ಪ್ರಯತ್ನಗಳನ್ನು ಮಾಡುವುದು ಸಹಜ. ಕಚ್ಚಾ ವಸ್ತುಗಳ ಕೊರತೆ, ಸಿದ್ದ ವಸ್ತುಗಳ ಅತ್ಯಧಿಕ ದಾಸ್ತಾನು, ಯಂತ್ರೋಪಕರಣಗಳ ದುರಸ್ತಿ, ಬೇಡಿಕೆಯ ಕೊರತೆ ಮುಂತಾದ ಪರಿಸ್ಥಿಗಳು ಉಂಟಾದಾಗ ಉದ್ಯೋಗದಾತರು ಇನ್ನಿತರ ಖರ್ಚು ವೆಚ್ಚಗಳನ್ನು ಕಡಿಮೆ ಮಾಡುವುದರ ಜೊತೆಗೆ ಸಂಸ್ಥೆಯಲ್ಲಿನ ಉದ್ಯೋಗಿಗಳನ್ನು ಕಡಿಮೆ ಮಾಡಿ ಆ ಮೂಲಕ ಕೂಡಾ ತಮ್ಮ ವೆಚ್ಚವನ್ನು ತಗ್ಗಿಸುವ ಪ್ರಯತ್ನಗಳನ್ನು ಮಾಡುತ್ತಲೇ ಬಂದಿರುತ್ತಾರೆ. ಆದರೆ ಕೈಗಾರಿಕಾ ವಿವಾದಗಳ ಕಾಯಿದೆಯು ಉದ್ಯೋಗಿಗಳನ್ನು ಕೆಲಸದಿಂದ ಬಿಡುಗಡೆ ಮಾಡುವುದು ಅಥವಾ ಕೆಲಸ ವಿಮುಕ್ತಿಯ (ರಿಟ್ರೆಂಚ್ಮೆಂಟ್) ಬಗ್ಗೆ ಹಲವಾರು ನಿಯಮಗಳನ್ನು ರೂಪಿಸಿದೆ. ಹಾಗಾಗಿ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆ ಮಾಡುವುದಕ್ಕೆ ಮೊದಲು ಉದ್ಯೋಗದಾತರು ಕೈಗಾರಿಕಾ ವಿವಾದಗಳ ಕಾಯಿದೆ ಮತ್ತು ನಿಯಮಗಳಲ್ಲಿ ತಿಳಿಸಿರುವ ಅಂಶಗಳಿಗೆ ಭಾದ್ಯರಾಗಿರತಕ್ಕದ್ದು.
ಉದ್ಯೋಗಿಗಳ ತೊಡಗಿಸಿಕೊಳ್ಳುವಿಕೆ
ಉದ್ಯೋಗಿಗಳ ತೊಡಗಿಸಿಕೊಳ್ಳುವಿಕೆ ಎಂಬುದು ಸಾಂಸ್ಥಿಕ ಮಾನವ ಸಂಪನ್ಮೂಲ ನಿರ್ವಹಣೆಯ ವಿಭಾಗವನ್ನು ವಿಶೇಷವಾಗಿ ಲಗ್ಗೆ ಇಟ್ಟಿದೆ (ವಿಭಾಗದಲ್ಲಿ ಬಹಳವಾಗಿ ಮಿಂಚುತ್ತಿದೆ). ಶತಮಾನಗಳಷ್ಟು ಹಳೆಯದಾದ, ಪೂರ್ವದ ಪರಿಕಲ್ಪನೆಗಳಾದ ಕುಟುಂಬ (ಎಂಬ ಸಂಸ್ಥೆ), ಪರಸ್ಪರ ಸಂಬಂಧ (ಅವಲಂಬನೆ), ಪ್ರೀತಿ ಇವುಗಳನ್ನು ಬಳಸಿ ಕಾರ್ಯಸಾಧನೆ ಮತ್ತು ಸಕಾರಾತ್ಮಕ ಫಲಿತಾಂಶ ಪಡೆಯಬಹುದು ಎಂಬುದು ಇಲ್ಲಿಯ ಸಂಸ್ಕೃತಿಯ ಭಾಗವಾಗಿಯೇ ಇದೆ. ಈಗ ಇದು ಪಶ್ಚಿಮದ ಸಾಂಸ್ಥಿಕ ರೂಪರೇಷೆಗೆ ಅಳವಡಿಕೆಯಾಗುತ್ತಿರುವುದು ಹೊಸದಾಗಿ ಮತ್ತು ಆಸಕ್ತಿದಾಯಕವಾಗಿ ಕಾಣಿಸುತ್ತದೆ. ಸಿ.ಆರ್. ಗೋಪಾಲ್ ನಿವೃತ್ತ ಸಹಾಯಕ ಪ್ರಧಾನ ವ್ಯವಸ್ಥಾಪಕರು, ಸ್ಮಯೋರ್ (SMIORE) ಸ್ಮಯೋರ್ ಗಣಿ ಕಂಪನಿ ಸಂಡೂರು ರಾಜಮನೆತನದ ಮುಖ್ಯಸ್ಥರ ಒಡೆತನದಲ್ಲಿ 1954 ರಲ್ಲಿ ಪ್ರಾರಂಭಗೊಂಡಿದೆ. ಅಂದಿನ ಗಣಿಯ ವಿಸ್ತೀರ್ಣ ಸುಮಾರು ನಲವತ್ತೇಳು ಚದುರ ಕಿ.ಮೀ. ಇದ್ದು, ಸರ್ಕಾರದ ಕಾನೂನು ಮತ್ತು ಇತರೆ ಕಾರಣಗಳಿಗಾಗಿ, ಕಾಲಕಾಲಕ್ಕೆ ಕಡಿಮೆಯಾಗುತ್ತಾ, ಪ್ರಸ್ತುತ ಅದರ ವ್ಯಾಪ್ತಿ 3200 ಹೆಕ್ಟೇರ್ಗಳಿವೆ. ಉತ್ತಮ ಗುಣಮಟ್ಟದ ಮ್ಯಾಂಗನೀಸ್ ಮತ್ತು ಕಬ್ಬಿಣದ ಅದಿರನ್ನು ಅನುಕ್ರಮವಾಗಿ ಮತ್ತು ವಾರ್ಷಿಕವಾಗಿ 2.54 ಲಕ್ಷ ಮತ್ತು 11.376 ದಶಲಕ್ಷ ಮೆಟ್ರಿಕ್ ಟನ್ ಉತ್ಪಾದನೆ ಮಾಡಲಾಗುತ್ತಿದೆ. ಉತ್ಪಾದನೆಯನ್ನು ಆಂತರಿಕವಾಗಿ ಮಾರಾಟ ಮಾಡುವುದರ ಜೊತೆಗೆ ಹೊರ ದೇಶಗಳಿಗೆ ರಫ್ತನ್ನೂ ಮಾಡಲಾಗುತ್ತಿದೆ. ಪ್ರಸ್ತುತ ಸಂಸ್ಥೆಯಲ್ಲಿ ಒಟ್ಟಾರೆಯಾಗಿ ಉದ್ಯೋಗಿ / ಕಾರ್ಮಿಕರ ಸಂಖ್ಯೆ 1972 ಇದೆ.
ನವೀನ್ ನಾಯ್ಕ್ ಆಫೀಸರ್, ಮಾನವ ಸಂಪನ್ಮೂಲ ವಿಭಾಗ, ಎಸ್ಸಿಲಾರ್ ಮ್ಯಾನುಫ್ಯಾಕ್ಚರಿಂಗ್ ಇಂಡಿಯಾ ಪ್ರೈ.ಲಿ., ಬೆಂಗಳೂರು. ಪೀಠಿಕೆ
ಭಾಷೆ ಎಂಬುದು ಅನಾದಿ ಕಾಲದಿಂದಲೂ ಸಂವಹನದ ಒಂದು ಮುಖ್ಯ ಭಾಗವಾಗಿ ಮಾನವನ ಎಲ್ಲ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಪೂರಕ ಸಾಧನವಾಗಿ ಕಾರ್ಯನಿರ್ವಹಿಸುತ್ತಿದೆ. ಬಹುಶಃ ಭಾಷೆ ಎಂಬುದೇ ಒಂದು ಸಾಧನವಾಗಿ ಮಾನವ ಮತ್ತು ಮೃಗಗಳನ್ನು ಬೇರ್ಪಡಿಸಿದೆ ಎಂದರೆ ತಪ್ಪಲ್ಲ. ಜಗತ್ತಿನ ಸಾವಿರಾರು ಭಾಷೆಗಳಿಗೆ ಹೇಳಿಕೊಳ್ಳುವಷ್ಟು ಇತಿಹಾಸ ಮತ್ತು ಅವಿತವ್ಯ ಪರಂಪರೆಯ ಬೆಂಬಲವಿದೆ. ಭಾಷೆ ಕೇವಲ ಶಬ್ದಗಳ ಆಡಂಬರವಾಗದೆ ಜನರ ಜೀವನಾಡಿಯಲ್ಲಿ ಬೆರೆತು ಹೋಗಿರುತ್ತದೆ. ಸಂಸ್ಕೃತಿಯ ಕೈಪಿಡಿಯಾಗಿ, ಆಚಾರ-ವಿಚಾರಗಳ ಬೆನ್ನೆಲುಬಾಗಿ, ವೃತ್ತಿಧರ್ಮಕ್ಕೆ ಆಸರೆಯಾಗಿ, ಸಂವಹನ ಕಲೆಯನ್ನು ಪೋಷಿಸುತ್ತಾ ಊರಿಂದ ಊರಿಗೆ ನಾಲಗೆಯ ಮೇಲೆ ಹರಿದಾಡಿ ತನ್ನ ತುಂಬು ತೋಳುಗಳಿಂದ ಜನರನ್ನು ಸೆಳೆದಪ್ಪಿಕೊಂಡ ಪರಿಯೇ ಅದ್ಭುತವಾದದ್ದು, ಭಾಷೆಯ ಬೆಂಬಲವಿಲ್ಲದೆ ಇದ್ದರೆ ಮಾನವನ ಬಾಯಿಂದ ಹೊರಟ ರೋದನೆಗಳೆಲ್ಲ ಚೀರಾಟಗಳಾಗಿರುತ್ತಿತ್ತು. ಅಕ್ಷರ ಜೋಡಣೆಗಳಿಲ್ಲದೆ ಅನುಭವಗಳು ಅರ್ಥ ಕಳೆದುಕೊಳ್ಳುತ್ತಿದ್ದವು. ಜಿ.ಪಿ.ನಾಯಕ್ ಪ್ರಧಾನ ಸಲಹೆಗಾರರು, ಟ್ಯಾಲೆಂಟ್ ಅವಿನ್ಯೂಸ್. ಮಾನವ ಸಂಪನ್ಮೂಲ ನಿರ್ವಹಣೆಯು (ಮಾ.ಸಂ.ನಿ.) ಸಮಕಾಲೀನ ಕೈಗಾರಿಕೆ ಮತ್ತು ಇತರೆ ಸಂಸ್ಥೆಗಳಲ್ಲಿನ ಆಡಳಿತ ವ್ಯವಸ್ಥೆಯ ಮುಖ್ಯ ಅಂಗವಾಗಿದೆ. ಏಕೆಂದರೆ ಯಾವುದೇ ಕೈಗಾರಿಕೆ ಅಥವಾ ಸಂಸ್ಥೆಯ ಉಳಿವು-ಅಳಿವು ಅದರ ಮಾನವ ಸಂಪನ್ಮೂಲ ನಿರ್ವಹಣೆಯ ದಕ್ಷತೆಯನ್ನು ಅವಲಂಬಿಸಿರುತ್ತದೆ. ಕಾರ್ಖಾನೆ, ವಾಣಿಜ್ಯ ಸಂಸ್ಥೆ ಹಾಗೂ ಇತರೆ ಸಂಘಸಂಸ್ಥೆಗಳಲ್ಲಿ, ಜನರನ್ನು ನೌಕರಿಗಾಗಿ ನೇಮಕ ಮಾಡುವುದು, ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಲು ಅವರಿಗೆ ತರಬೇತಿ ನೀಡುವುದು, ಅವರು ಮಾಡುವ ಕೆಲಸಕ್ಕೆ ಸೂಕ್ತ ಸಂಬಳ ಮತ್ತು ಭತ್ಯೆಯನ್ನು ನೀಡುವುದು, ಮಾಲೀಕ ಮತ್ತು ಕಾರ್ಮಿಕರ ನಡುವೆ ಕಲಹ ರಹಿತ ಸಂಬಂಧವನ್ನು ಬೆಳೆಸುವುದು, ಕಾರ್ಮಿಕ ಕಾಯಿದೆಗಳನ್ನು ಪಾಲಿಸುವುದು, ಸಂಸ್ಥೆಯ ಧ್ಯೇಯೋದ್ದೇಶಗಳನ್ನು ಪೂರೈಸಲು ನೌಕರರ ಮನವೊಲಿಸುವುದು ಇತ್ಯಾದಿ ಚಟುವಟಿಕೆಗಳನ್ನು ಮಾನವ ಸಂಪನ್ಮೂಲ ನಿರ್ವಹಣೆ ಎಂದು ಹೇಳಲಾಗುತ್ತದೆ.
ಕೆ. ವಿಠ್ಠಲ್ ರಾವ್ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ಅಂಡ್ ಲೀಗಲ್ ಅಡ್ವೈಸರ್ ಶ್ರೀ ಖಾಡಿಲ್ಕರ್, ಎಲ್ಲರಿಗೂ ನಮಸ್ಥಾರ. ಸಂಸ್ಥೆಯು ತೆಗೆದುಕೊಳ್ಳಲು ನಿರ್ಧಸಿರುವ ಒಂದು ಪ್ರಮುಖ ಯೋಜನೆಯ ಬಗ್ಗೆ ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ನಾನು ಹರ್ಷಿಸುತ್ತೇನೆ. ನಿಮಗೆಲ್ಲಾ ತಿಳಿದಿರುವಂತೆ ಜರ್ಮನಿಯ ನನ್ನ ಹಿಂದಿನ ಭೇಟಿಯ ಸಂದರ್ಭದಲ್ಲಿ, ಏರ್ಕ್ರಾಫ್ಟ್ನ ಟ್ರಾನ್ಸ್ಮಿಷನ್ ಬಿಡಿಭಾಗಗಳನ್ನು ಉತ್ಪಾದಿಸಲು ಮತ್ತು ಸರಬರಾಜು ಮಾಡುವ ಬಗ್ಗೆ ಬೆಕ್ಸ್ಟೀರ್ನೊಂದಿಗೆ ಒಂದು ಕರಾರಿಗೆ ಸಹಿ ಮಾಡಿರುತ್ತೇನೆ. ಆ ಬಿಡಿಭಾಗವು ನವೀನ ತಾಂತ್ರಿಕತೆಯೊಂದಿಗೆ ಅತ್ಯಂತ ಕ್ಲಿಷ್ಟಕರವಾದದ್ದಾಗಿರುತ್ತದೆ. ನಮ್ಮ ಸಂಸ್ಥೆಯು ಅಂತಹ ಬಿಡಿಭಾಗವನ್ನು ಉತ್ಪಾದಿಸಿ ರಫ್ತು ಮಾಡುವ ಮೊದಲನೇ ಸಂಸ್ಥೆಯಾಗಿರುತ್ತದೆ. ಅಂದಾಜಿನ ಪ್ರಕಾರ, ನಮಗೆ ಬೇಡಿಕೆ ಆದೇಶ ಬಂದಲ್ಲಿ, ನಮ್ಮ ಉತ್ಪಾದನಾ ಸಾಮರ್ಥ್ಯದ ಬಳಕೆಯು ಶೇಕಡ 85ರಷ್ಟಕ್ಕೆ ತಲುಪಬಹುದು ಮತ್ತು ಲಾಭಾಂಶವೂ ಸಹ ಉತ್ತಮವಾಗಿರುತ್ತದೆ.
|
Categories
All
Archives
January 2024
Human Resource Kannada Conference50,000 HR PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. |